ರಾಜ್ಯಆರ್ಥಿಕ ನೆರವು ಪಡೆದು ಕೌಶಲ್ಯ ತರಬೇತಿ ನೀಡದ ಕಂಪನಿಗಳ ವಿರುದ್ಧ ಕ್ರಿಮಿನಲ್ ಕೇಸ್: ಶರಣ ಪ್ರಕಾಶ್ ಪಾಟೀಲ್
ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಪಡೆದರೂ ಸಹ ಅಭ್ಯರ್ಥಿಗಳಿಗೆ ತರಬೇತಿ ನೀಡದ 8 ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜೀವನೋಪಾಯ ಹಾಗೂ ಕೌಶಲ್ಯಭಿವೃದ್ದಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.