ಕ್ಯಾರ್ ಚಂಡಮಾರುತ

ಚಂಡಮಾರುತ, ಭಾರಿ ಮಳೆಗೆ ತತ್ತರಿಸಿದ ತಮಿಳುನಾಡು: ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ಬಂದ್!
ಕ್ಯಾರ್ ಚಂಡಮಾರುತ ಒಮನ್ ನತ್ತ ಮುಖ ಮಾಡಿದೆಯಾದರೂ ಅದರ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ದಕ್ಷಿಣ ಭಾರತದಲ್ಲಿ ಇನ್ನು ಚಂಡಮಾರುತದ ಅಬ್ಬರ ಮುಂದುವರೆದಿದ್ದು, ತಮಿಳುನಾಡಿನ ಆರು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದೆ.

ಕರಾವಳಿಯಲ್ಲಿ ವ್ಯಾಪಕ ಮಳೆ, ಚಂಡಮಾರುತದ ಭೀತಿ
ಅರಬ್ಬಿ ಸಮುದ್ರದಲ್ಲಿ ಕಳೆದ ವಾರ ಕಾಣಿಸಿಕೊಂಡಿದ್ದ ‘ಕ್ಯಾರ್’ ಚಂಡಮಾರುತವು ಒಮನ್ ನತ್ತ ತನ್ನ ದಿಕ್ಕು ಬದಲಿಸಿದರೂ ಮಂಗಳವಾರ ರಾತ್ರಿ ಮಂಗಳೂರು ಸಹಿತ ಜಿಲ್ಲೆಯ ಹಲವು ಕಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಮತ್ತೆ ಚಂಡಮಾರುತದ ಭೀತಿ ಎದುರಾಗಿದೆ.

ತಗ್ಗಿಲ್ಲ 'ಕ್ಯಾರ್' ಅಬ್ಬರ: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ
ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿದ್ದ ಕ್ಯಾರ್ ಚಂಡಮಾರುತ ಇದೀಗ ಗಲ್ಫ್ ನತ್ತ ಮುಖ ಮಾಡಿದ್ದು, ಆದರೂ ಕರ್ನಾಟಕ, ತಮಿಳುನಾಡು, ರಾಯಲಸೀಮಾ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿಯಲ್ಲಿ 'ಕ್ಯಾರ್' ಹಾವಳಿ, ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥ
ವಾಯುಭಾರ ಕುಸಿತದಿಂದ ಅರಬ್ಬಿ ಸಮುದದ್ರದಲ್ಲಿ ಎದ್ದಿರುವ ’ಕ್ಯಾರ್’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ

ಕರಾವಳಿಯಲ್ಲಿ ಕ್ಯಾರ್ ಅಬ್ಬರ: ಉಡುಪಿಯಲ್ಲಿ ಮಳೆಗೆ ಇಬ್ಬರು ಬಲಿ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರ್ನಾಟಕ ಕರಾವಳಿ ಭಾಗದಲ್ಲಿ ಕ್ಯಾರ್ ಚಂಡಮಾರುತದ ಅಬ್ಬರ ಜೋರಾಗಿದ್ದು ಈ ಭಾಗದಾದ್ಯಂತ ಗುರುವಾರ ರಾತ್ರಿ, ಶುಕ್ರವಾರಗಳಂದು ಭಾರೀ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಇಬ್ಬರು ಸಾವಿಗೀಡಾಗಿದ್ದಾರೆ.

