ರಾಜ್ಯಉತ್ತರ ಕನ್ನಡ: ಸಿದ್ದಾಪುರ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಾಲಕಿ ಸಾವು
ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಐದು ವರ್ಷದ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ. ಸಿದ್ದಾಪುರ ತಾಲ್ಲೂಕಿನ ಹೊಸ ಪ್ರದೇಶಗಳಿಗೆ ಕೆಎಫ್ಡಿ ನಿಧಾನವಾಗಿ ಹರಡುತ್ತಿದೆ.