ಕ್ರಮಕ್ಕೆ ಆಗ್ರಹ

ಮಹಾರಾಷ್ಟ್ರ: ಮಹಿಳೆ ವಿವಸ್ತ್ರ ಪ್ರಕರಣ, ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ
ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿರುವ ಪ್ರಕರಣ ಕುರಿತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ರೂಪಾಲಿ ಚಕಂಕರ್ ಭಾನುವಾರ ಒತ್ತಾಯಿಸಿದ್ದಾರೆ. ಈ ಸಂಬಂಧ ಬಿಜೆಪಿ ಎಂಎಲ್ಸಿಯ ಪತ್ನಿ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.

ಯತ್ನಾಳ್ ವಿರುದ್ಧ ರಾಜ್ಯಾಧ್ಯಕ್ಷರು ಕ್ರಮಕೈಗೊಳ್ಳಲಿ: ಆಯನೂರು ಮಂಜುನಾಥ್
ಬಸನಗೌಡ ಪಾಟೀಲ್ ವಿರುದ್ಧ ಮೇಲ್ಮನೆ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಕಿಡಿಕಾರಿದ್ದು, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

