ಖಾದರ್

ಫೆಬ್ರವರಿ 12ರಿಂದ ಬಜೆಟ್ ಅಧಿವೇಶನ: ಶಾಸಕರಿಗೆ ಉಚಿತ ಊಟ-ತಿಂಡಿ ವ್ಯವಸ್ಥೆ!
ವಿಧಾನ ಮಂಡಲ ಜಂಟಿ ಅಧಿವೇಶನ ಫೆಬ್ರವರಿ 12ರಿಂದ ಆರಂಭಗೊಳ್ಳಲಿದ್ದು, 23ರವರೆಗೆ ನಡೆಯಲಿದೆ. ಫೆ.12ರಂದು ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದು, ಫೆ.16ರಂದು ಬಜೆಟ್ ಮಂಡನೆ ನಿರೀಕ್ಷೆಯಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಸೋಮವಾರ ಮಾಹಿತಿ ನೀಡಿದರು.

ಕೊರೋನಾ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ: ಶಾಸಕ ಖಾದರ್ ಆರೋಪ
ಕೊರೋನಾ ಚಿಕಿತ್ಸೆ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಶಾಸಕ ಯುಟಿ ಖಾದರ್ ಅವರು ಆರೋಪಿಸಿದ್ದಾರೆ.

ಪಿಪಿಇ ಕಿಟ್ ಧರಿಸದೆ ಮೃತ ವ್ಯಕ್ತಿಯ ದಫನಕ್ಕೆ ಗುಂಡಿ ತೋಡಿದ ಶಾಸಕ ಖಾದರ್: ಸಾರ್ವಜನಿಕ ವಲಯದಿಂದ ತೀವ್ರ ಟೀಕೆ
ಕೊರೋನಾದಿಂದ ಮೃತಪಟ್ಟ ಕುಟುಂಬಸ್ಥರ ಮೃತದೇಹ ನೋಡಲೂ ಹೋಗದಿರುವ ಭೀತಿಯ ವಾತಾವರಣ ಇರುವಾಗ ಮಂಗಳೂರಿನಲ್ಲಿ ಕೊರೋನಾದಿಂದ ಸಾವಿಗೀಡಾದ 70 ವರ್ಷದ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಶಾಸಕ ಯುಟಿ.ಖಾದರ್ ಸ್ವತಃ ಹಾರೆ ಹಿಡಿದು ಗುಂಡಿ ತೋಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಪಾಕ್'ನಲ್ಲಿ ಮೋದಿ ಬಿರಿಯಾನಿ ತಿಂದರು ಹೇಳಿಕೆಗೆ ಬಿಜೆಪಿಗರ ಆಕ್ರೋಶ: ಖಾದರ್ ವಿಷಾದ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದು ಬಂದಿದ್ದರು ಎಂದು ಮಾಜಿ ಸಚಿವ ಯುಟಿ ಖಾದರ್ ಅವರು ಬುಧವಾರ ನೀಡಿದ್ದ ಹೇಳಿಕೆ ಸದನದಲ್ಲಿ ಭಾರೀ ಕೋಲಾಹಲ, ಗದ್ದಲ, ಅವಾಚ್ಯ ಪದ ಹಾಗೂ ಏಕವಚನ ಪ್ರಯೋಗಕ್ಕೂ ಕಾರಣವಾಗಿ ಅಂತಿಮವಾಗಿ ಖಾದರ್ ಅವರು ಬಿರಿಯಾನಿ ತಿಂದರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಘಟನೆ ನಡೆಯಿತು.

ಮೀಸಲಾತಿ ರದ್ದು ಬಿಜೆಪಿಗರ ಹಿಡನ್ ಅಜೆಂಡಾ: ಯು.ಟಿ.ಖಾದರ್
ಸಂವಿಧಾನದ ಪ್ರಕಾರ ಮೀಸಲಾತಿಯನ್ನು ಪರೋಕ್ಷವಾಗಿ ರದ್ದು ಮಾಡುವುದು ಬಿಜೆಪಿಗರ ಹಿಡನ್ ಅಜೆಂಡಾ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಯುಟಿ ಖಾದರ್ ಗೆ ಬೆದರಿಕೆ ಹಾಕಿದ ಯುವಕರು, ವಿಡಿಯೋ ವೈರಲ್
ಕರಾವಳಿ ಪ್ರದೇಶದಲ್ಲಿ ಶಾಂತಿ ಕದಡುವ ನಿಟ್ಟಿನಲ್ಲಿ ಬಲ ಪಂಥೀಯ ಸಂಘಟನೆಯೊಂದರ ಯುವಕರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿರುವ ಕೆಲ ವಿಡಿಯೋಗಳು ವೈರಲ್ ಆಗಿವೆ.

ಮಂಗಳೂರು ಹಿಂಸಾಚಾರ: ಮೃತರ ಪರಿಹಾರಕ್ಕೆ ತಡೆ- ಸ್ಪಷ್ಟನೆಗೆ ಖಾದರ್ ಆಗ್ರಹ
ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿದ್ದ ಕುಟುಂಬಸ್ಥರಿಗೆ ನೀಡಲಾಗಿದ್ದ ಪರಿಹಾರಕ್ಕೆ ರಾಜ್ಯ ಸರ್ಕಾರ ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮಂಗಳೂರು ಶಾಸಕ ಯುಟಿ ಖಾದರ್ ಅವರು ಆಗ್ರಹಿಸಿದ್ದಾರೆ.

ಪ್ರಚೋದನಾಕಾರಿ ಹೇಳಿಕೆ: ಶಾಸಕ ಯು.ಟಿ.ಖಾದರ್ ವಿರುದ್ಧ ಎಫ್ಐಆರ್ ದಾಖಲು
ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧದ ಪ್ರತಿಭಟನೆ ಕುರಿತು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪೌರತ್ವ ಕಾಯ್ದೆ: ಬಿಜೆಪಿ ಜನಾದೇಶವನ್ನು ಗೌರವಿಸುತ್ತಿದೆ- ಸಿ.ಟಿ.ರವಿ
ಯಾವ ಕಾರಣಕ್ಕೆ ಅಧಿಕಾರಕ್ಕೆ ಬಂದಿತ್ತೋ ಅದೇ ಕಾರಣಕ್ಕೆ ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಯನ್ನು ಜಾರಿಗೆ ತಂದಿದೆ. ಜನರು ಬಯಸಿದ್ದನ್ನೇ ಬಿಜೆಪಿ ಮಾಡಿದೆ. ಇದನ್ನು ವಿರೋಧಿಸುವವರು ಪ್ರಜಾಪ್ರಭುತ್ವದ ವಿರೋಧಿಗಳು, ಜನಾದೇಶ ವಿರೋಧಿಸುವವರಾಗುತ್ತಾರೆಂದು ಸಚಿವ ಸಿ.ಟಿ.ರವಿಯವರು ಹೇಳಿದ್ದಾರೆ.

