ರಾಜ್ಯನೋಂದಣಿ ಆಗದ ಖಾಸಗಿ ನೀರಿನ ಟ್ಯಾಂಕರ್ಗಳ ವಿರುದ್ಧ ಕಾನೂನು ಕ್ರಮ: BWSSB
ಬೆಂಗಳೂರಿನಲ್ಲಿ ಖಾಸಗಿ ನೀರಿನ ಟ್ಯಾಂಕರ್ಗಳ ನೋಂದಣಿ ಕಾರ್ಯ ಮುಗಿದಿದ್ದು, ಶೇ.95 ರಷ್ಟು ಖಾಸಗಿ ನೀರಿನ ಟ್ಯಾಂಕರ್ಗಳನ್ನ ಈಗಾಗಲೇ ನೋಂದಾಯಿಸಲಾಗಿದೆ. ನೋಂದಣಿ ಆಗದೆ ಇರುವಂತಹ ಖಾಸಗಿ ನೀರಿನ ಟ್ಯಾಂಕರ್ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹೇಳಿದೆ.