ರಾಜ್ಯಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಶೇ.75ರಷ್ಟು ಹಾಸಿಗೆ ಕೋವಿಡ್ ಚಿಕಿತ್ಸೆಗೆ ಮೀಸಲು: ಸರ್ಕಾರ ಆದೇಶ
ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಸಮಸ್ಯೆ ನೀಗಿಸಲು ಖಾಸಗಿ ಆಸ್ಪತ್ರೆಗಳ ತೀವ್ರ ವಿರೋಧವನ್ನು ಪರಿಗಣಿಸದೇ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಪೈಕಿ ಶೇ.75ರಷ್ಟನ್ನು ಕಡ್ಡಾಯವಾಗಿ ಕೋವಿಡ್ ಚಿಕಿತ್ಸೆಗೆ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.