ದೇಶಖ್ಯಾತ ಗಣಿತಶಾಸ್ತ್ರಜ್ಞೆ ಡಾ. ಮಂಗಳಾ ನಾರ್ಲಿಕರ್ ನಿಧನ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಣಿತಶಾಸ್ತ್ರಜ್ಞೆ ಮತ್ತು ವಿಜ್ಞಾನಿ, ಡಾ.ಜಯಂತ್ ನಾರ್ಲಿಕರ್ ಅವರ ಪತ್ನಿ ಡಾ.ಮಂಗಳಾ ನಾರ್ಲಿಕರ್ ಸೋಮವಾರ ಮಹಾರಾಷ್ಟ್ರದ ಪುಣೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.