ಸಿನಿಮಾ ಸುದ್ದಿಮತ್ತೆ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ನಟ ಕಿಶೋರ್; ಗನ್ಸ್ ಅಂಡ್ ರೋಸಸ್ ಚಿತ್ರತಂಡ ಸೇರ್ಪಡೆ!
ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಅಭಿನಯದ ಚೊಚ್ಚಲ ಸಿನಿಮಾ 'ಗನ್ ಅಂಡ್ ರೋಸಸ್' ಚಿತ್ರತಂಡಕ್ಕೆ ದಕ್ಷಿಣ ಭಾರತದ ನಟ ಕಿಶೋರ್ ಸೇರಿಕೊಂಡಿದ್ದಾರೆ. ಎಚ್ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಕಿಶೋರ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.