ಬಾಲಿವುಡ್'ಗುಂಜನ್ ಸಕ್ಸೇನಾ - ದಿ ಕಾರ್ಗಿಲ್ ಗರ್ಲ್' ಸ್ಟ್ರೀಮಿಂಗ್ ಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ
ನೆಟ್ಫ್ಲಿಕ್ಸ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿರುವ 'ಗುಂಜನ್ ಸಕ್ಸೇನಾ - ದಿ ಕಾರ್ಗಿಲ್ ಗರ್ಲ್' ಚಿತ್ರದ ಸ್ಟ್ರೀಮಿಂಗ್ ಗೆ ತಡೆ ನಿಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ, ಚಿತ್ರದಲ್ಲಿ ಭಾರತೀಯ ವಾಯುಪಡೆ (ಐಎಎಫ್)ಯನ್ನು ಕೀಳಾಗಿ ತೋರಿಸಿಲಾಗಿದೆ ಎಂಬ ಕೇಂದ್ರದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.