ಗುಡುಗು ಸಹಿತ ಮಳೆ

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ; ದೆಹಲಿ ಜಲಾವೃತ; ಜನಜೀವನ ಅಸ್ತವ್ಯಸ್ತ, Red ಅಲರ್ಟ್ ಘೋಷಣೆ!
ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಭಾರತೀಯ ಹವಾಮಾನ ಇಲಾಖೆ (IMD) ದೆಹಲಿಯಲ್ಲಿ 'ರೆಡ್ ಅಲರ್ಟ್' ಘೋಷಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಕಡೆ ಮಳೆ ಸಾಧ್ಯತೆ ಇದೆ.

ಗುಡುಗು ಸಹಿತ ಮಳೆ: ಬೆಂಗಳೂರಿನ ಹಲವೆಡೆ ಜನಜೀವನ ಅಸ್ತವ್ಯಸ್ತ
ಮಳೆಯ ಪರಿಣಾಮ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುವಂತಾಗಿತ್ತು. ಕೆಲವೇ ಗಂಟೆಗಳಲ್ಲಿ ಸುರಿದ ಮಳೆ ನಗರದ ಪರಿಸ್ಥಿತಿಯನ್ನು ಅಸ್ತವ್ಯಸ್ತಗೊಳಿಸಿದ್ದರ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

Karnataka Rains: ಉತ್ತರ ಕರ್ನಾಟಕದಲ್ಲಿ 'ಭಾರಿ ಮಳೆ' ಮುನ್ಸೂಚನೆ; ಬೆಂಗಳೂರಿನ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು?
ಬಿರು ಬೇಸಿಗೆಯಿಂದ ಬಸವಳಿದಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಕೊನೆಗೂ ಸಿಹಿ ಸುದ್ದಿ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ.

ಮೇ 28ರ ನಂತರ ಬಿಸಿಗಾಳಿ ತಗ್ಗುವ ಸಾಧ್ಯತೆ: ಮೇ 29ಕ್ಕೆ ಧೂಳು, ಗುಡುಗು ಸಹಿತ ಮಳೆ ನಿರೀಕ್ಷಿತ- ಐಎಂಡಿ
ಮೇ 29 ಮತ್ತು 30ರಂದು ಉತ್ತರ ಭಾರತದಲ್ಲಿ ತೀವ್ರ ಮಟ್ಟದ ಬಿಸಿ ಗಾಳಿ ತಗ್ಗಲಿದ್ದು, ಅನೇಕ ಕಡೆಗಳಲ್ಲಿ ಧೂಳು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.

