ರಾಜ್ಯಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಠೇವಣಿದಾರರಿಗೆ ಸಿಹಿ ಸುದ್ದಿ: ಕೇಂದ್ರಕ್ಕೆ ತೇಜಸ್ವಿ ಸೂರ್ಯ ಕೃತಜ್ಞತೆ
ಬೆಂಗಳೂರಿನ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ನ ಠೇವಣಿದಾರರಿಗೆ ನರೇಂದ್ರ ಮೋದಿ ಸರ್ಕಾರ 5 ಲಕ್ಷ ರೂ, ವರೆಗಿನ ಠೇವಣಿ ವಿಮೆ ಮೊತ್ತವನ್ನು ಮರುಪಾವತಿ ಮಾಡುವ ಮೂಲಕ ತ್ವರಿತವಾಗಿ ಸ್ಪಂದಿಸಿದ್ದು ಶ್ಲಾಘನೀಯ ಎಂದು ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವೀ ಸೂರ್ಯ ತಿಳಿಸಿದ್ದಾರೆ.