ಗೃಹ ಲಕ್ಷ್ಮೀ ಯೋಜನೆ

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: 'ಇದು ಮಹಿಳಾ ಸಬಲೀಕರಣವಲ್ಲ, ದೊಡ್ಡ ಹಗರಣ'; ಆರ್. ಅಶೋಕ್ ವಾಗ್ದಾಳಿ
ಕಳೆದ ಮೂರು ವರ್ಷಗಳಿಂದ ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರ, ಅಕ್ರಮ ಮತ್ತು ಹಣದ ದುರುಪಯೋಗದಲ್ಲಿ ತೊಡಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ವರ್ಷಾಚರಣೆಯನ್ನು ಯಾವ ಆಧಾರದ ಮೇಲೆ ಆಚರಿಸಲಾಗುತ್ತಿದೆ?

ಸರ್ಕಾರಿ ನೌಕರರ ವೇತನದ ಹಣ ಗೃಹಲಕ್ಷ್ಮೀ ಯೋಜನೆಗೆ ಬಳಕೆ: ರಾಜ್ಯ ಸರ್ಕಾರದ ವಿರುದ್ಧ BJP ಆರೋಪ
ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ. ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ.

ಗೃಹಲಕ್ಷ್ಮೀ ಯೋಜನೆ: ಫಲಾನುಭವಿಗಳಿಗೆ 3 ಲಕ್ಷ ರೂ ವರೆಗೂ ಸಾಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ವಿಶ್ವದ ಅತಿದೊಡ್ಡ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದ್ದು, ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ.

ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿ: ಮಹಿಳೆಯೊಬ್ಬರ ಸಂಭ್ರಮಕ್ಕೆ ಯೋಜನೆ ಕಾರಣವಾಗಿರುವುದು ಸಾರ್ಥಕ ತರಿಸಿದೆ ಎಂದ ಸಿಎಂ
ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆಂದು ತಿಳಿಸಿದ್ದಾರೆ.

ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಗೆ 15 ಸಾವಿರ ಮಂದಿ ನೋಂದಣಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ.

ಚುನಾವಣೆ ವೇಳೆ ಮಾತ್ರ ಗೃಹಲಕ್ಷ್ಮಿ ಹಣ ಬಿಡುಗಡೆ: BJP
ಸಮೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗ್ಯಾರಂಟಿ ಯೋಜನೆಯನ್ನು ಘೋಷಿಸಿದೆ. ಕಳೆದೊಂದು ವರ್ಷದಲ್ಲಿ ಅಭಿವೃದ್ಧಿ ಆರಂಭವೇ ಆಗಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಇವರು ಚಾಲನೆಯನ್ನೇ ಕೊಟ್ಟಿಲ್ಲ. ಮಹಿಳೆಯರಿಗೆ ಗೃಹಲಕ್ಷ್ಮಿ ಎಂದರು ಲೋಕಸಭಾ ಚುನಾವಣೆ ಬಂದಿತ್ತು.

ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿ ವಾಲ್’ಪೇಪರ್’ನಲ್ಲಿ ಸಿಎಂ ಫೋಟೋ ಹಾಕಿದ ಮಹಿಳೆ; ಸಾರ್ಥಕವಾಯ್ತು ಎಂದ ಸಿದ್ದರಾಮಯ್ಯ
ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್ ಖರೀದಿಸಿದ್ದು, ವಾಲ್‌ಪೇಪರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ.

‘ಗೃಹಲಕ್ಷ್ಮೀ’ ನೋಂದಣಿ ತಾತ್ಕಾಲಿಕ ಸ್ಥಗಿತ: ಸಚಿವೆ ಹೆಬ್ಬಾಳ್ಕರ್ ಸ್ಪಷ್ಟನೆ; ಜಾಲತಾಣ ನಿರ್ವಹಿಸುವವರ ವಿರುದ್ಧ ತೀವ್ರ ಗರಂ
ಗೃಹಲಕ್ಷ್ಮಿ ಯೋಜನೆಯ ನೋಂದಣಿಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ ಎಂಬ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಟ್ವೀಟ್'ವೊಂದು ರಾಜ್ಯದ ಜನತೆಯನ್ನು ತೀವ್ರ ಗೊಂದಲಕ್ಕೊಳಗಾಗುವಂತೆ ಮಾಡಿದ ಬೆಳವಣಿಗೆಗಳು ಗುರುವಾರ ಕಂಡು ಬಂದಿತ್ತು.

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಆ.28 ಅಥವಾ 30ಚಾಲನೆ ನೀಡಲಾಗುತ್ತಿದೆ.

