ರಾಜ್ಯಸಾರಿಗೆ ಇಲಾಖೆ ನೌಕರರ ಮುಷ್ಕರ ವಾಪಸ್?: ಗೃಹ ಸಚಿವರನ್ನು ಭೇಟಿ ಮಾಡಿ ಸುಳಿವು ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್
ಸಾರಿಗೆ ಇಲಾಖೆ ನೌಕರರ ಮುಷ್ಕರ ವಿಷಯವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ವಿವರಿಸಿದ್ದೇನೆ. ಕೋವಿಡ್ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಮುಷ್ಕರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಸಾರಿಗೆ ಇಲಾಖೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.