ದೇಶಗುಜರಾತ್: 2002 ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಅಪರಾಧಿ ಚಿಕಿತ್ಸೆ ವೇಳೆ ಆಸ್ಪತ್ರೆಯಲ್ಲಿ ಸಾವು
2002ರಲ್ಲಿ ನಡೆದಿದ್ದ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದಲ್ಲಿ ಗುಜರಾತಿನ ವಡೋದರಾದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಯೊಬ್ಬ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.