ಗೌರವ ನಮನ

ಇದೇ ಅಂಬೇಡ್ಕರ್ ಗೆ ಸಲ್ಲಿಸುವ ನಿಜವಾದ ಗೌರವ: ಪ್ರಧಾನಿ ಮೋದಿ
ಸೋಮವಾರ ನಾಗ್ಪುರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, 1956 ರಲ್ಲಿ ಅಂಬೇಡ್ಕರ್ ತಮ್ಮ ಅನುಯಾಯಿಗಳೊಂದಿಗೆ ಬೌದ್ಧ ಧರ್ಮವನ್ನು ಸ್ವೀಕರಿಸಿದ ದೀಕ್ಷಾಭೂಮಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು

ಭಗತ್ ಸಿಂಗ್ 116ನೇ ಜನ್ಮಜಯಂತಿ: ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಂದ ನಮನ
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 116 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ, ನ್ಯಾಯ ಮತ್ತು ಸ್ವಾತಂತ್ರ್ಯಕ್ಕಾಗಿ ಭಾರತದ ಅವಿರತ ಹೋರಾಟದ ಪ್ರತೀಕವಾಗಿದ್ದಾರೆ ಎಂದು ಹೇಳಿದ್ದಾರೆ.

ಲಂಡನ್: ಬಸವೇಶ್ವರ ಪುತ್ಥಳಿಗೆ ರಾಹುಲ್ ಗೌರವ ನಮನ
ಒಂದು ವಾರ ಲಂಡನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಗುರು ಬಸವೇಶ್ವರರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದ್ದಾರೆ. ಫೇಸ್ ಬುಕ್ ಫೇಜ್ ನಲ್ಲಿ ಈ ಕುರಿತ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ.

ಪದಾತಿ ಸೈನ್ಯ ದಿನ: ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನ
ಇಂದು ಅಕ್ಟೋಬರ್ 27, ಕಾಲಾಳುಪಡೆ ಅಂದರೆ ಪದಾತಿ ಸೈನ್ಯದಳ ದಿನ. ಇದರ ಅಂಗವಾಗಿ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ದೇಶದ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಭಯೋತ್ಪಾದನೆ ದಮನಕ್ಕೆ ಪೊಲೀಸರಿಗೆ ಎಚ್ಚರಿಕೆ ಅತ್ಯಗತ್ಯ: ಮುಖ್ಯಮಂತ್ರಿ ಬೊಮ್ಮಾಯಿ
ಭಯೋತ್ಪಾದನೆ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡಾ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಅಗಲಿದ ವೀರ ಸೇನಾನಿಗಳಿಗೆ ತಮಿಳು ನಾಡು ಸರ್ಕಾರ ಗೌರವ, ಸಿಎಂ ಸ್ಟಾಲಿನ್ ಪುಷ್ಪ ನಮನ, ಪಾರ್ಥಿವ ಶರೀರ ದೆಹಲಿಗೆ ರವಾನೆ
ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಭೀಕರ ಮಿಲಿಟರಿ ಹೆಲಿಕಾಪ್ಟರ್ ಅಪಘಾತ ದುರಂತದಲ್ಲಿ ಮೃತಪಟ್ಟ ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿಯ ಕಳೇಬರಕ್ಕೆ ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಗೌರವ ನಮನ ಸಲ್ಲಿಸಿದರು.

ಪೊಲೀಸ್ ಸಂಸ್ಮರಣಾ ದಿನ: ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಹುಬ್ಬಳ್ಳಿಯ ಸಿ.ಎ. ಆರ್. ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು.

ರಾಜೀವ್ ಗಾಂಧಿ 77ನೇ ಜನ್ಮ ದಿನಾಚರಣೆ: ರಾಹುಲ್ ಸೇರಿದಂತೆ ಹಲವು ಗಣ್ಯರಿಂದ ಗೌರವ ನಮನ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 77ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ನವದೆಹಲಿಯ ವೀರ ಭೂಮಿಯಲ್ಲಿ ಕಾಂಗ್ರೆಸ್ ಮುಖಂಡ, ಲೋಕಸಭೆ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಲವು ಮುಖಂಡರು ಗೌರವ ನಮನ ಸಲ್ಲಿಸಿದರು.

ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪುಣ್ಯತಿಥಿ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರಿಂದ ಗೌರವ ನಮನ
ಇಂದು ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಪುಣ್ಯತಿಥಿ. ಇದರ ಅಂಗವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಗೌರವ ಪೂರ್ವಕ ನಮನ ಸಲ್ಲಿಸಿದ್ದಾರೆ.

