ರಾಜ್ಯಕೇಂದ್ರದ ವಿರುದ್ಧ ಜನರನ್ನು ಎತ್ತಿಕಟ್ಟಲು ಕಾಂಗ್ರೆಸ್ ಸಾರ್ವಜನಿಕರ ಹಣ ಬಳಸುತ್ತಿದೆ: ರಾಜ್ಯಪಾಲರಿಗೆ ಬಿಜೆಪಿ ದೂರು
ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ 'ಚಲೋ ದೆಹಲಿ' ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ವಿವಿಧ ಪತ್ರಿಕೆಗಳಲ್ಲಿ ಮುಖಪುಟ ಜಾಹೀರಾತು ನೀಡಿ ಸಾರ್ವಜನಿಕರ ಹಣವನ್ನು ಬಳಸಿಕೊಳ್ಳುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಬಿಜೆಪಿ ದೂರು ನೀಡಿದೆ.