ರಾಜ್ಯಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮುಕ್ತಾಯ: 17 ಮಸೂದೆಗಳು ಅಂಗೀಕಾರ
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸತತ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ತೆರೆಬಿದ್ದಿದೆ.ಡಿಸೆಂಬರ್ 4 ರಿಂದ 15 ರವರೆಗೆ 66 ಗಂಟೆಗಳ ಕಾಲ ನಡೆದ ಅಧಿವೇಶನದಲ್ಲಿ 17 ಮಸೂದೆಗಳನ್ನು ಅಂಗೀಕರಿಸಲಾಯಿತು.