ರಾಜ್ಯಗೃಹಲಕ್ಷ್ಮಿ ಯೋಜನೆ: ನಾಡದೇವತೆ ಚಾಮುಂಡೇಶ್ವರಿಗೆ 59 ತಿಂಗಳ ಹಣ ಸಂದಾಯ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ಒಪ್ಪಿಸಿದ್ದರು.