ರಾಜ್ಯಅಥಣಿ: 60 ವಿದ್ಯಾರ್ಥಿಗಳಿದ್ದ ಶಾಲಾ ಬಸ್- ಕಂಟೈನರ್ ಮುಖಾಮುಖಿ ಡಿಕ್ಕಿ; ಚಾಲಕರು ಸ್ಥಳದಲ್ಲೇ ಸಾವು
ಬೆಳಗಾವಿ ಜಿಲ್ಲೆ ಅಥಣಿ ಹೊರವಲಯದಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಈ ಎರಡು ವಾಹನಗಳ ಚಾಲಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.