ರಾಜ್ಯಚಾಲನಾ ಪರೀಕ್ಷೆ: ಕೇಂದ್ರ ಮೋಟಾರು ವಾಹನಗಳ ನಿಯಮ ಪಾಲಿಸದ ಅಧಿಕಾರಿಗಳು, ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ
ಚಾಲನಾ ಪರವಾನಗಿ ನೀಡಲು ಪರೀಕ್ಷೆ ನಡೆಸುವಾಗ ಸಾರಿಗೆ ಇಲಾಖೆ ಅಧಿಕಾರಿಗಳು ಕೇಂದ್ರ ಮೋಟಾರು ವಾಹನಗಳ ನಿಯಮ 15 ಅನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.