ಬಾಲಿವುಡ್'ಆತ್ಮನಿರ್ಭರ್' ಆಗುವುದಾಗಿ ಪ್ರತಿಜ್ಞೆ ಮಾಡಿ, ಚೀನಾ ಉತ್ಪನ್ನ ಬಹಿಷ್ಕರಿಸಿ: ಕ್ವೀನ್ ಕಂಗನಾ ಕರೆ
ಇತ್ತೀಚಿಗೆ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ನಡೆದ ಮಲ್ಲಯುದ್ಧದಲ್ಲಿ 20 ಭಾರತೀಯ ಯೋಧರು ಹುತಾತ್ಮರಾದ ಬೆನ್ನಲ್ಲೇ ದೇಶದಲ್ಲಿ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಿ ಅಭಿಯಾನ ಆರಂಭವಾಗಿದ್ದು, ಈ ಅಭಿಯಾನಕ್ಕೆ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಸಹ ಕೈ ಜೋಡಿಸಿದ್ದಾರೆ.