ರಾಜ್ಯಸಾರ್ವಜನಿಕ ಹಿತಕ್ಕಿಂತ ದೇಶದ ಭದ್ರತೆ ಮುಖ್ಯ: ಚೀನಾ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಕಂಪನಿ ಟೆಂಡರ್ ರದ್ದುಗೊಳಿಸಿದ ಹೈಕೋರ್ಟ್
ಸಾರ್ವಜನಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ಇಎಲ್) ಚೀನಾದ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿರುವ ಖಾಸಗಿ ಕಂಪನಿಗೆ ನೀಡಿದ್ದ ಟೆಂಡರ್ ಅನ್ನು ನ್ಯಾಯಾಲಯ ರದ್ದುಗೊಳಿಸಿದ್ದು, ಟೆಂಡರ್ ನೀಡಿರುವುದನ್ನು ಅಮಾನ್ಯ ಎಂದು ಘೋಷಿಸಿದೆ.