ಚುನಾವಣಾ ಖಾತರಿಗಳು

‘ಎಡಿಟ್ ಮಾಡಿದ ವಿಡಿಯೋ’ ಶೇರ್ ಮಾಡಿದ ಕೆಟಿ ರಾಮರಾವ್‌ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಅವರು ಮಂಗಳವಾರ ವಿಡಿಯೋವೊಂದನ್ನು ಹಂಚಿಕೊಂಡು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ಗ್ಯಾರಂಟಿಗಳನ್ನು ಜಾರಿಗೊಳಿಸಿಲ್ಲ, 'ಸುಳ್ಳು ಭರವಸೆ' ಬಗ್ಗೆ ಎಚ್ಚರದಿಂದಿರಿ: ಜೆಪಿ ನಡ್ಡಾ
ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಭರವಸೆಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ಆರೋಪಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಆರ್‌ಎಸ್ ಎರಡೂ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿವೆ ಎಂದು ಗುರುವಾರ ದೂರಿದ್ದಾರೆ.

ಕರ್ನಾಟಕದ ಖಾತರಿಗಳಿಗಿಂತ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿರುವ ಆರು ಖಾತರಿಗಳು ಉತ್ತಮವಾಗಿವೆ: ಡಿಕೆ ಶಿವಕುಮಾರ್
ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತದೆ ಮತ್ತು ಅದರ ಚುನಾವಣಾ ಭರವಸೆಗಳನ್ನು ಜಾರಿಗೆ ತರಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ; ಇಂದಿನಿಂದ ಬಿಜೆಪಿ ಪ್ರತಿಭಟನೆ
ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಆಡಳಿತಾರೂಢ ಕಾಂಗ್ರೆಸ್ ನೀಡಿದ ಐದು ಚುನಾವಣಾ ಖಾತರಿಗಳನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿರುವ ವಿರುದ್ಧ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲಿದೆ.

ಖಾತರಿಗಳ ಜಾರಿಗೆ ಆಗ್ರಹ: ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಜುಲೈ 4 ರಿಂದ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ವಿಧಾನಸೌಧದ ಅಧಿವೇಶನದ ವೇಳೆ ವಿಧಾನಸಭೆಯ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಘೋಷಿಸಿದ ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಜುಲೈ 4 ರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಿದ್ದಾರೆ.

