ಚುನಾವಣಾ ನೀತಿ ಸಂಹಿತೆ

ಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ: ಇದು ನೀತಿ ಸಂಹಿತೆ ಉಲ್ಲಂಘನೆ- ಬೊಮ್ಮಾಯಿ ಕಿಡಿ
ಪ್ರತಿ ಚುನಾವಣೆಗೂ ಮುನ್ನ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡುತ್ತಿರುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಸಂಡೂರು ಉಪಚುನಾವಣೆ: ದಾಖಲೆ ಇಲ್ಲದ 27.50 ಲಕ್ಷ ರೂ ನಗದು ಹಣ ವಶಕ್ಕೆ
ಸಂಡೂರು ಉಪಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಿದ್ದು, ಪರಿಶೀಲನೆಯನ್ನು ತೀವ್ರಗೊಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಕಾರಣ ನೀಡಿ ಇಡಿಯಿಂದ ಮದ್ಯ ವಶ: ಅಧಿಕಾರ ದುರುಪಯೋಗ ಎಂದು ಹೈಕೋರ್ಟ್ ಆಕ್ಷೇಪ!
ಕರ್ನಾಟಕ ರಾಜ್ಯ ಪಾನೀಯಗಳ ನಿಗಮ ನಿಯಮಿತ (KSBCL)ಕ್ಕೆ ಮದ್ಯ ಪೂರೈಸಲು ಕಂಪೆನಿಗೆ ಅವಕಾಶ ನೀಡಿದ್ದರೂ ಕೂಡ ಮಾದರಿ ನೀತಿ ಸಂಹಿತೆ ಉಲ್ಲೇಖಿಸಿ ಮದ್ಯ ಬಾಟಲಿಗಳನ್ನು ತುಂಬಿದ ಎರಡು ಟ್ರಕ್‌ಗಳನ್ನು ವಶಪಡಿಸಿಕೊಂಡು ಕಂಪನಿಯ ವಿರುದ್ಧ ಕೇಸು ದಾಖಲಿಸಿರುವ ಅಬಕಾರಿ ಇಲಾಖೆಯ ನಡವಳಿಕೆಯನ್ನು ಕರ್ನಾಟಕ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ,

ಇಂಡಿಗೋ ವಿಮಾನದಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್
ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಬುಧವಾರ ಆರೋಪಿಸಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜಾರಿ ಎಫೆಕ್ಟ್: ಔಷಧ, ಆ್ಯಂಬುಲೆನ್ಸ್'ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ!
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಇದರಿಂದಾಗಿ ವಾರ್ಷಿಕ ಔಷಧ ಖರೀದಿ, ಡಯಾಲಿಸಿಸ್ ಮತ್ತು 108 ಆ್ಯಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಿಂದ ನಾಗರೀಕ ಕಾಮಗಾರಿಗಳಿಗೆ ಅಡ್ಡಿಯಿಲ್ಲ: ಬಿಬಿಎಂಪಿ ಸ್ಪಷ್ಟನೆ
ಚುನಾವಣಾ ನೀತಿ ಸಂಹಿತೆ ನಾಗರೀಕ ಕಾಮಗಾರಿಗಳಿಗೆ ತಡೆಯೊಡ್ಡಲಿದೆ ಎಂಬ ಮಾತುಗಳನ್ನು ಬಿಬಿಎಂಪಿ ಉನ್ನತಾಧಿಕಾರಿಗಳು ನಿರಾಕರಿಸಿದ್ದು, ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್ (ಪಿಎಂಸಿ) ಎಂಬ ವ್ಯವಸ್ಥೆ ಅಡಿಯಲ್ಲಿ ಮಳೆನೀರು ಚರಂಡಿಗಳು, ಮೇಲ್ಸೇತುವೆಗಳು ಸೇರಿದಂತೆ 6,000 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಎಫ್‌ಐಆರ್ ದಾಖಲಿಸಲು ಅಧಿಕಾರಿಗಳಿಗೆ ತರಬೇತಿ ನೀಡಿ; ಸರ್ಕಾರಕ್ಕೆ ಹೈಕೋರ್ಟ್
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣಗಳ ಅಪರಾಧಗಳನ್ನು ದಾಖಲಿಸುವ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚುನಾವಣಾ ವಿಚಕ್ಷಣ ದಳ(ಫ್ಲೇಯಿಂಗ್ ಸ್ಕ್ವಾಡ್)ಕ್ಕೆ ಅಗತ್ಯ ತರಬೇತಿ ನೀಡುವಂತೆ ಮುಖ್ಯ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ, ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ಎಚ್ಚರಿಕೆ ನೀಡಿದ ಚುನಾವಣಾ ಆಯೋಗ
ಅಕ್ಟೋಬರ್ 30 ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಯ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಚುನಾವಣಾ ಆಯೋಗ

ಉಪ ಚುನಾವಣಾ ನೀತಿ ಸಂಹಿತೆ ಮುಂದೂಡಿಕೆ ವಿವಾದ: ವಿಚಾರಣೆ ನಾಳೆಗೆ ಮುಂದೂಡಿಕೆ
ರಾಜ್ಯದ ಅನರ್ಹ ಶಾಸಕರ 15 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಉಪ ಚುನಾವಣೆ ಘೋಷಣೆಯಾಗಿದ್ದರೂ, ನೀತಿ ಸಂಹಿತೆ ಜಾರಿಗೊಳಿಸದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರಕ್ಕೆ ಮುಂದೂಡಿದೆ.

