ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ಜಾಹೀರಾತುಗಳ ಮೂಲಕ ಸರ್ಕಾರದಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: BJP
ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ.

'ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ' ಬಿಜೆಪಿಯ ನವನೀತ್ ವಿರುದ್ಧ ಪ್ರಕರಣ ದಾಖಲು
ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ, ರಾಹುಲ್ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿಜೆಪಿ, ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್
ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಭಜನೆ ಮತ್ತು ಮಾನಹಾನಿಕರ ಭಾಷಣ ಮಾಡಿದ್ದಾರೆ ಎಂಬ ಪ್ರತಿಪಕ್ಷದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಚುನಾವಣಾ ಆಯೋಗ ಗುರುವಾರ ನೋಟಿಸ್ ಜಾರಿ ಮಾಡಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಈಶ್ವರಪ್ಪ ವಿರುದ್ಧ FIR ದಾಖಲು
ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಚಿತ್ರದುರ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ದೂರು ದಾಖಲು
ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರು ಶನಿವಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಘಟನೆ ವರದಿಯಾಗಿದೆ.

ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ: ಸಚಿವೆ ಹೆಬ್ಬಾಳ್ಕರ್ ವಿರುದ್ಧ ಎಫ್ಐಆರ್ ದಾಖಲು ಸಾಧ್ಯತೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಕಾರ್ಯಕರ್ತೆಯರ ಜತೆಗೆ ಸಭೆ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಈ ಬಗ್ಗೆ ಎಫ್ಐಆರ್ ದಾಖಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ತೆಲಂಗಾಣ ಡಿಜಿ, ಐಜಿಪಿ ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ!
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಜೆಪಿ ನಡ್ಡಾ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

'ಬಿರಿಯಾನಿ ರೆಡಿ ಇದೆ' ಹೇಳಿಕೆ: ಸಚಿವ ಸೋಮಶೇಖರ್ ವಿರುದ್ಧ ಎಫ್ಐಆರ್ ದಾಖಲು
ಪ್ರಚಾರದ ವೇಳೆ ಕಾರ್ಯಕರ್ತರಿಗೆ ಬಿರಿಯಾನಿ ರೆಡಿ ಇದೆ, ಸವಿಯಿರಿ ಎಂದು ಹೇಳಿದ್ದ ಸಚಿವ ಸೋಮಶೇಖರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

