ಜನಸಂಕಲ್ಪ ಯಾತ್ರೆ

ಜನತೆಯಿಂದ ಭಾರೀ ಬೆಂಬಲ: ಜನವರಿವರೆಗೂ ಜನಸಂಕಲ್ಪ ಯಾತ್ರೆ ನಡೆಸಲು ಬಿಜೆಪಿ ನಿರ್ಧಾರ!
ಪಕ್ಷದ ಬಲ ಹೆಚ್ಚಿಸಲು ಜಿಲ್ಲೆ ಹಾಗೂ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಲು ಬಿಜೆಪಿ ಆರಂಭಿಸಿದ್ದ ಜನಸಂಕಲ್ಪ ಯಾತ್ರೆಗೆ ಜನತೆಯಿಂದ ಭಾರೀ ಬೆಂಬಲ ವ್ಯಕ್ತವಾದ ಹಿನ್ನೆಲೆಯಲ್ಲಿ ಪಕ್ಷವು ಇದೀಗ ಜನವರಿವರೆಗೂ ರಾಜ್ಯಾದಾದ್ಯಂತ ಯಾತ್ರೆಯನ್ನು ಮುಂದುವರೆಸಲು ನಿರ್ಧರಿಸಿದೆ.

ಹಿರಿಯೂರು: ಬೈಕ್ ತಪ್ಪಿಸಲು ಹೋಗಿ ಸಿಎಂ ಎಸ್ಕಾರ್ಟ್ ವಾಹನ ಪಲ್ಟಿ; ನಾಲ್ವರು ಪೊಲೀಸ್, ಮಹಿಳೆ, ಮಗುವಿಗೆ ಗಂಭೀರ ಗಾಯ
ಏಕಾ ಏಕಿ ಎದುರಾದ ಬೈಕ್ ನ್ನು ತಪ್ಪಿಸಲು ಹೋಗಿ ಸಿಎಂ ಬೆಂಗಾವಲು ಪಡೆ ವಾಹನ ಪಲ್ಟಿಯಾಗಿರುವ ಘಟನೆ ಚಿತ್ರದುರ್ಗದ ಹಿರಿಯೂರಿನ ರಾಣಿಕೆರೆಯಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ: ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಸಿಎಂ, ಮಾಜಿ ಸಿಎಂ
ಇನ್ನು ಕೇವಲ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದರೆ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆಯನ್ನು ಕೈಗೊಂಡಿದೆ.

ಪ್ರಧಾನಿ ಮೋದಿ ವಿಚಾರದಲ್ಲಿ ಹಗುರವಾಗಿ ಮಾತನಾಡುವವರಿಗೆ ಜನರಿಂದಲೇ ತಕ್ಕ ಉತ್ತರ: ಬಿಎಸ್ ಯಡಿಯೂರಪ್ಪ
ಕಳೆದ 8 ವರ್ಷದಲ್ಲಿ ಗರಿಷ್ಠ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ನರೇಂದ್ರ ಮೋದಿಜಿ ಅವರ ಬಗ್ಗೆ ಸೋನಿಯಾ ಮತ್ತು ರಾಹುಲ್ ಗಾಂಧಿಯವರು ಹಗುರವಾಗಿ ಮಾತನಾಡುತ್ತಿದ್ದಾರೆ. ಇಂಥ ಹಗುರ ಮಾತನ್ನಾಡಿದ ಕಾಂಗ್ರೆಸ್ ಮುಖಂಡರು ಮತ್ತು ಆ ಪಕ್ಷವನ್ನು ದೇಶದ ಜನರು ಕ್ಷಮಿಸುವುದಿಲ್ಲ.

SC/ST ಮೀಸಲಾತಿ ಹೆಚ್ಚಿಸಲು ಕಾಂಗ್ರೆಸ್ ಗೆ ಸಾಧ್ಯವಾಗಲಿಲ್ಲ: ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ವಾಗ್ದಾಳಿ!
ಜನಸಂಕಲ್ಪ ಯಾತ್ರೆ ಪ್ರಾರಂಭಿಸಿರುವ ಭಾರತೀಯ ಜನತಾ ಪಕ್ಷದ ನಾಯಕರು ತಮ್ಮ ಸರ್ಕಾರದ 'ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ' ವಿಷಯವನ್ನು ತನ್ನ ಟ್ರಂಪ್ ಕಾರ್ಡ್ ಮಾಡಿಕೊಂಡಿದ್ದಾರೆ.

