ಜನೌಷಧಿ ಕೇಂದ್ರ

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!
ದೇಶದ ಅಂಚೆ ಕಚೇರಿ ಜಾಲವನ್ನು ಬಳಸಿಕೊಂಡು ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನಾ ಕೇಂದ್ರಗಳನ್ನು ಸ್ಥಾಪಿಸುವುದರ ಜೊತೆಗೆ ಇಂಡಿಯಾ ಪೋಸ್ಟ್ ಮೂಲಕ ಮನೆಗಳ ಬಾಗಿಲಿಗೇ ಔಷಧಿ ತಲುಪಿಸುವ ವ್ಯವಸ್ಥೆ ಜಾರಿಗೆ ತರಲು ಕೇಂದ್ರ ಚಿಂತನೆ ನಡೆಸುತ್ತಿದೆ.

ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು: ಸಾರ್ವಜನಿಕ ಹಿತಾಸಕ್ತಿಗಳಲ್ಲಿ ರಾಜಕೀಯ ಸರಿಯಲ್ಲ; ಸರ್ಕಾರಕ್ಕೆ ಹೈಕೋರ್ಟ್ ಕಿವಿಮಾತು
ಜನೌಷಧಿ ಕೇಂದ್ರಗಳು ಕಳೆದ 5ರಿಂದ 7 ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ, ಇದು ಅವುಗಳ ಅಗತ್ಯತೆಯನ್ನು ಸ್ಪಷ್ಟಪಡಿಸುತ್ತದೆ. ಯಾವುದೇ ಸಾರ್ವಜನಿಕ ಹಾನಿ ಅಥವಾ ಕಾನೂನು ಉಲ್ಲಂಘನೆ ನಡೆದಿರುವುದನ್ನು ಸರ್ಕಾರ ಸಾಬೀತುಪಡಿಸಿಲ್ಲ.

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!
ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಜನೌಷಧಿ ಕೇಂದ್ರ(JAK) ಸಾಂದ್ರತೆ ಮತ್ತು ವ್ಯವಹಾರದ ಪ್ರಮಾಣದಲ್ಲಿ ಮುಂಚೂಣಿಯಲ್ಲಿವೆ. ಆದರೆ ಮಧ್ಯಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳು ಜನಸಂಖ್ಯಾ ಅಥವಾ ಆರ್ಥಿಕ ಬಲದ ಹೊರತಾಗಿಯೂ ಹಿಂದುಳಿದಿವೆ.

ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ?: ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ; ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತಡೆ
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳನ್ನ ಬಂದ್ ಮಾಡುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಕೇಶ್, ಮಹಾಲಿಂಗಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠವು ರಾಜ್ಯ ಸರ್ಕಾರ ಆದೇಶವನ್ನ ರದ್ದುಗೊಳಿಸಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಸ್ಥಗಿತಗೊಳಿಸುವ ಕ್ರಮ ಸಮರ್ಥಿಸಿ ನಡ್ಡಾಗೆ ದಿನೇಶ್ ಗುಂಡೂರಾವ್ ಪತ್ರ
ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ವ್ಯಕ್ತಪಡಿಸಿದ ಕಳವಳಗಳಿಗೆ ಪ್ರತಿಕ್ರಿಯೆಯಾಗಿ ದಿನೇಶ್ ಗುಂಡೂ ರಾವ್ ಈ ಸ್ಪಷ್ಟನೆ ನೀಡಿದ್ದಾರೆ.

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧಿ ಕೇಂದ್ರಗಳು ಬಂದ್: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆ (PMBJP) ಅಡಿಯಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಒದಗಿಸುವ ಗುರಿ ಹೊಂದಿದೆ.

ಮೆಡಿಸಿನ್ ಮಾಫಿಯಾಗೆ ಮಣಿದು ಜನೌಷಧಿ ಕೇಂದ್ರಗಳ ಮುಚ್ಚಲು ರಾಜ್ಯ ಸರ್ಕಾರ ಮುಂದು: BJP ಆರೋಪ
ಪ್ರಧಾನ ಮೋದಿಯವರ ಫೋಟೊ ಇರುವ ಕಾರಣಕ್ಕೆ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿದ್ದಾರೆ. ಹಾಗಿದ್ದರೆ ಇಂದಿರಾ ಕ್ಯಾಂಟೀನ್, ಬಸ್‌ಗಳಲ್ಲಿ ನಿಮ್ಮ ಪಕ್ಷದವರ ಫೋಟೋ ಯಾಕೆ ಹಾಕಿದ್ದೀರಿ?

ಜನೌಷಧಿ ಕೇಂದ್ರ ಮುಚ್ಚಬೇಡಿ: ಸಿಎಂ ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಸೋಮಣ್ಣ ಮನವಿ
ಸಿದ್ದರಾಮಯ್ಯ ದೀರ್ಘಕಾಲದ ರಾಜಕೀಯ ಅನುಭವ ಹೊಂದಿದ್ದಾರೆ. ಆದರೆ, ಅವರು ಬಡವರು ಹಾಗೂ ತಳವರ್ಗದ ಜನರ ಹಿತ ಕಾಯುತ್ತಿಲ್ಲ. ಸರ್ಕಾರದ ನಿರ್ಧಾರವನ್ನು ಕೂಡಲೇ ಮರುಪರಿಶೀಲನೆ ಮಾಡಬೇಕು.


