ದೇಶಶಹೀನಾಬಾಗ್ ಬಳಿಕ ಜಫರಾಬಾದ್ ನಲ್ಲಿ ಸಿಎಎ ವಿರುದ್ಧ ಪ್ರತಿಭಟನೆ: ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ
ಶಹೀನಾಬಾಗ್ ಬಳಿಕ ಜಫರಾಬಾದ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಭುಗಿಲೆದಿದ್ದು, ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಣಾಮ ದೆಹಲಿಯ ಪ್ರಮುಖ ರಸ್ತೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ತಿಳಿದುಬಂದಿದೆ.