ದೇಶಟ್ರಂಪ್ ಭೇಟಿ ಬೆನ್ನಲ್ಲೇ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸ್ ಮುಖ್ಯ ಪೇದೆ ಸೇರಿ 5 ಸಾವು, 100 ಜನರಿಗೆ ಗಾಯ
ರಾಜಧಾನಿ ನವದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಭಾನುವಾರ ಸಂಜೆ ವೇಳೆಗೆ ನಡೆದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಿ ಹೋರಾಟಗಾರರ ನಡುವಣ ಸಂಘರ್ಷ, ಸೋಮವಾರ ತೀವ್ರ ಹಿಂಸಾ ಸ್ವರೂಪ ಪಡೆದುಕೊಂಡಿದ್ದು, ಘಟನೆಯಲ್ಲಿ ಪೊಲೀಸ್ ಮುಖ್ಯ ಪೇದೆ ಸೇರಿ ಐವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.