ಜಮೀನು ವಿವಾದ

ಉತ್ತರಪ್ರದೇಶ: ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ!
ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದ ಧೀರೇಂದ್ರ ಪ್ರತಾಪ್ ಸಿಂಗ್ ಶನಿವಾರದಿಂದ ಲಕ್ನೋದ ಸುಶಾಂತ್ ಗಾಲ್ಫ್ ಸಿಟಿಯಿಂದ ಕಾಣೆಯಾಗಿದ್ದು ಇದೀಗ ಅವರ ಮೃತದೇಹ ಪತ್ತೆಯಾಗಿದೆ.

ಬೆಂಗಳೂರು: ಜಮೀನು ವಿವಾದ; ಡೆತ್ ನೋಟ್ ಬರೆದಿಟ್ಟು ಮುಖ್ಯ ಶಿಕ್ಷಕ ಆತ್ಮಹತ್ಯೆ
ಹೊಸಕೋಟೆಯ ಜಡಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನರಸಿಂಹಮೂರ್ತಿ ಆತ್ಮಹತ್ಯೆ ಮಾಡಿಕೊಂಡವರು. ಹೊಸಹಳ್ಳಿ ರಸ್ತೆಯಲ್ಲಿ ವಾಸಿಸುತ್ತಿದ್ದ ನರಸಿಂಹ ಮೂರ್ತಿ ಗುರುವಾರ ರಾತ್ರಿ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಬೆಳಗಾವಿ: ಜಮೀನು ವಿವಾದಕ್ಕೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; 20 ಮಂದಿ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಿ, ಲೈಂಗಿಕ ದೌರ್ಜನ್ಯ ಎಸಗಲಾಗಿರುವ ಆಘಾತಕಾರಿ ಘಟನೆ ನಡೆದಿದ್ದು, ಈ ಸಂಬಂಧ 20 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಪ್ಪಳ: ಜಮೀನು ವಿವಾದ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಪತಿಗೆ ಥಳಿತ!
ಜಮೀನು ವಿವಾದ ಸಂಬಂಧ ಗುಂಪೊಂದು 46 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಪತಿಯನ್ನು ಥಳಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ವರದಿಯಾಗಿದೆ. ಜುಲೈ 25 ರಂದು ಈ ಘಟನೆ ನಡೆದಿದ್ದು, 16 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳಲ್ಲಿ ಹಲವರು ಮಹಿಳೆಯ ಸಂಬಂಧಿಕರಾಗಿದ್ದಾರೆ.

ಶಿವಮೊಗ್ಗ: ಜಮೀನು ವಿವಾದದಿಂದ ಬೇಸರ, ವಿಷ ಕುಡಿದು ಮಹಿಳೆ ಆತ್ಮಹತ್ಯೆ
ಕೌಟುಂಬಿಕ ಆಸ್ತಿ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಡೆದಿದೆ.

ಬೆಂಗಳೂರು: ಜಮೀನಿಗಾಗಿ ಜಗಳ ಜೋಡಿ ಕೊಲೆಯಲ್ಲಿ ಅಂತ್ಯ!
ಜಮೀನಿಗಾಗಿ ನಡೆದ ಜಗಳ ತಾರಕಕ್ಕೇರಿ ಅಪ್ಪ-ಮಗನ ಜೋಡಿ ಕೊಲೆಯೊಡನೆ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನ ಹೊರವಲಯದ ಹೊಸಕೋಟೆಯಲ್ಲಿ ನಡೆದಿದೆ.

ರಾಮನಗರ: ಜಮೀನು ಸಿಗಲಿಲ್ಲ ಎಂದು ತಾಯಿಯನ್ನೇ ಕೊಂದು ಶೌಚಗುಂಡಿಯಲ್ಲಿ ಹೂತಿಟ್ಟ ಮಗ!
ಜಮೀನು ವಿವಾದದಿಂದ ಉಂಟಾದ ಜಗಳದ ಕಾರಣ ಮಗನೊಬ್ಬ ತನ್ನ ತಾಯಿಯನ್ನೇ ಕೊಂದು ಶೌಚಾಲಯದಲ್ಲಿ ಹೂತಿಟ್ಟ ಅಮಾನುಷ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

