ದೇಶಜಮ್ಮು-ಕಾಶ್ಮೀರ: 35 ವರ್ಷಗಳಲ್ಲಿ ಇದೇ ಮೊದಲು, ಮೊಹರಂ ಮೆರವಣಿಗೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಭಾಗಿ
ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ಶಿಯಾ ಸಮುದಾಯದ ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡರು. ಕಳೆದ 35 ವರ್ಷಗಳಲ್ಲಿ ರಾಜ್ಯದ ಮುಖ್ಯಸ್ಥರೊಬ್ಬರು ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ಇದೇ ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ.