ಜಲಾಶಯ

ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ: ಕಬಿನಿ ಜಲಾಶಯ ನೀರಿನ ಮಟ್ಟ 9 ಅಡಿ ಕುಸಿತ!
ಶುಕ್ರವಾರ ಜಲಾಶಯದಿಂದ ನದಿಗೆ ಸುಮಾರು 14,600 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು 7,184 ಕ್ಯುಸೆಕ್‌ಗೆ ಇಳಿಕೆಯಾಗಿದೆ.

ದಕ್ಷಿಣ ಭಾರತದಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಸಾಮಾನ್ಯಕ್ಕಿಂತ ಕಡಿಮೆ: ಭತ್ತದ ಕೃಷಿ ಮೇಲೆ ಎಫೆಕ್ಟ್!
ದಕ್ಷಿಣ ಭಾರತದ ಪ್ರದೇಶದಲ್ಲಿ ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಸೇರಿವೆ, ಈ ಭಾಗದ 47 ಜಲಾಶಯಗಳನ್ನು ಕೇಂದ್ರ ಜಲ ಆಯೋಗ (CWC) ಮೇಲ್ವಿಚಾರಣೆ ಮಾಡುತ್ತದೆ.

ಶಿವಮೊಗ್ಗದಲ್ಲಿ ಭಾರಿ ಮಳೆ: ಭೋರ್ಗರೆದು ಹರಿಯುತ್ತಿರುವ ನದಿಗಳು; ಮೂರು ಜಲಾಶಯ ಭರ್ತಿ!
ನಿರಂತರ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಪ್ರಮುಖ ಜಲಾಶಯಗಳು ಮತ್ತು ಜಲಮೂಲಗಳಲ್ಲಿ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಮಂಗಳವಾರ ಶಿಕ್ಷಣ ಇಲಾಖೆ ರಜೆ ಘೋಷಿಸಿತ್ತು.

ಒಂದೂವರೆ ತಿಂಗಳ ಬಳಿಕ ಮಳೆರಾಯನ ಕೃಪೆ; ರಾಜ್ಯದ ಜಲಾಶಯಗಳಲ್ಲಿ ಜೀವಕಳೆ; ಪ್ರಮುಖ ಅಣೆಕಟ್ಟುಗಳಿಗೆ ಒಳಹರಿವು ಹೆಚ್ಚಳ!
ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದ್ದು, ಅಣೆಕಟ್ಟುಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ.

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಬತ್ತಿದ ನದಿಗಳಿಗೆ ಜೀವಕಳೆ; KRS ಸೇರಿದಂತೆ ಹಲವು ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳ
ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಬರೊಬ್ಬರಿ ಆರು ತಿಂಗಳ ಸುದೀರ್ಘ ಕಾಯುವಿಕೆಯ ನಂತರ ಒಂದು ಸಾವಿರ ಕ್ಯೂಸೆಕ್ ನೀರು ಒಳಹರಿವು ಹರಿದುಬಂದಿದೆ.

ಕರಾವಳಿಯಲ್ಲಿ ಮುಂಗಾರು ಚುರುಕು: ಉತ್ತರ ಕನ್ನಡದಲ್ಲಿ ಭಾರೀ ಮಳೆ; ಸೂಪಾ, ಕದ್ರಿ ಅಣೆಕಟ್ಟುಗಳ ಒಳಹರಿವು ಹೆಚ್ಚಳ
ಹೊನ್ನಾವರ ಪಟ್ಟಣದ ರಾಮತೀರ್ಥ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡದ ಒಂದು ಭಾಗ ಕುಸಿದಿದ್ದು, ಜನನಿಬಿಡ ಪ್ರದೇಶದಲ್ಲಿ ಸಂಚಾರಕ್ಕೆ ಅಡ್ಡಿಯಾಯಿತು. ಮಣ್ಣು ಕುಸಿತದಿಂದಾಗಿ ಹೆದ್ದಾರಿಯನ್ನು ಏಕಮುಖ ಸಂಚಾರಕ್ಕೆ ಇಳಿಸಲಾಯಿತು.

ಬಿಸಿಲ ಝಳ: ರಾಜ್ಯದ ಕೆರೆ-ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತ, ಹೆಚ್ಚಿದ ಆತಂಕ..!
ರಾಜ್ಯದ ಕೆಲ ಭಾಗಗಳಲ್ಲಿ, ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ, ತಾಪಮಾನ ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ಮಟ್ಟ ತಲುಪಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.

ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಮಟ್ಟ ಕುಸಿತ: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ!
ರಾಜ್ಯದ 13 ಪ್ರಮುಖ ಅಣೆಕಟ್ಟುಗಳ ಪೈಕಿ ಹತ್ತು ಜಲಾಶಯಗಳಲ್ಲಿ ಈಗ ಹಿಂದಿನ ವರ್ಷಕ್ಕಿಂತ ಕಡಿಮೆ ನೀರು ಸಂಗ್ರಹವಾಗಿದೆ. ಹೆಚ್ಚುತ್ತಿರುವ ತಾಪಮಾನದಿಂದಾಗಿ ಅಣೆಕಟ್ಟುಗಳಿಂದ ನೀರು ಆವಿಯಾಗುವಿಕೆ ಇದಕ್ಕೆ ಪ್ರಮುಖ ಕಾರಣವಾಗಿದೆ.

KRS ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ಹೂಳು ಸಂಗ್ರಹ: 65 ಟಿಎಂಸಿ ನೀರು ವ್ಯರ್ಥ; ಪರಿಹಾರ ಇಲ್ಲ ಎಂದ ಸರ್ಕಾರ!
ಜಲಾಶಯಗಳಿಂದ ಹೂಳು ತೆಗೆಯಲು ಯಾವುದೇ ನಿರ್ದಿಷ್ಟ ಮಾರ್ಗಸೂಚಿಗಳಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯ ಕಾರ್ಯಕ್ರಮವೂ ಇಲ್ಲ ಎಂದು ಅವರು ಹೇಳಿದರು.

