ದೇಶಲೈಂಗಿಕ ಕಿರುಕುಳ ಆರೋಪ: ಜಾನಿ ಮಾಸ್ಟರ್ ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು
ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್ ಪೊಲೀಸರು ಸೆಪ್ಟೆಂಬರ್ 19 ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.