ಕ್ರೀಡೆಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 2013ರಲ್ಲಿ ಐಪಿಎಲ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ದಂಧೆಯನ್ನು ಬಯಲಿಗೆಳೆದಿದ್ದ ತಮಿಳುನಾಡಿನ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.