ರಾಜ್ಯರೂ.11 ಸಾವಿರ ಕೋಟಿ ಜಿಎಸ್ಟಿ ಬಾಕಿ ಬಿಡುಗಡೆ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯ ಸರಕಾರಕ್ಕೆ ಕೇಂದ್ರದಿಂದ ಬರಬೇಕಾಗಿರುವ ಜಿಎಸ್ಟಿ ಪರಿಹಾರ ನಷ್ಟದ ಬಾಕಿ ಮೊತ್ತ ರೂ.11 ಸಾವಿರ ಕೋಟಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯ ರಾಜ್ಯ ಪ್ರತಿನಿಧಿ ಹಾಗೂ ಗೃಹ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.