ರಾಜ್ಯಬೆಂಗಳೂರು: ಮೆಟ್ರೋ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯುವಕನ ಯತ್ನ!
ನಮ್ಮ ಮೆಟ್ರೋ ರೈಲಿನ ಮುಂದೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 07-12 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಬಿಎಂಆರ್ ಸಿಎಲ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಸಂಭಾವ್ಯ ದೊಡ್ಡ ಅನಾಹುತವೊಂದು ತಪ್ಪಿದೆ.