ರಾಜ್ಯಜಿಲ್ಲೆ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ: ಕ್ಷೇತ್ರಗಳ ಮರುವಿಂಗಡಣೆಗೆ ಸರ್ಕಾರ ಅಧಿಸೂಚನೆ ಶೀಘ್ರವೇ ಪ್ರಕಟ
ಕ್ಷೇತ್ರಗಳ ಮರು ವಿಂಗಡಣೆಯ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ತಾಲ್ಲೂಕು ಪಂಚಾಯಿತಿ (TP) ಮತ್ತು ಜಿಲ್ಲಾ ಪಂಚಾಯಿತಿಗಳಿಗೆ (ZP) ಚುನಾವಣೆ ನಡೆಸಲು ಆಕ್ಷೇಪಣೆಗಳನ್ನು ಆಹ್ವಾನಿಸುವ ಕರಡು ಮೀಸಲಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಅಂತಿಮಗೊಳಿಸುವುದಾಗಿ ರಾಜ್ಯ ಸರ್ಕಾರ ನಿನ್ನೆ ಮಂಗಳವಾರ ಹೈಕೋರ್ಟ್ ಗೆ ತಿಳಿಸಿದೆ.