ರಾಜ್ಯಓಮಿಕ್ರಾನ್ ವಿರುದ್ಧದ ದಿಟ್ಟ ಹೋರಾಟಕ್ಕೆ ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಳ ಅಗತ್ಯವಿದೆ: ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ
ರಾಜ್ಯದಲ್ಲಿ ಈಗಾಗಲೇ ಕಾಲಿಟ್ಟು ಆತಂಕ ಸೃಷ್ಟಿಸಿರುವ ಹೆಮ್ಮಾರಿ ಓಮಿಕ್ರಾನ್ ರೂಪಾಂತರಿ ವೈರಸ್ ವಿರುದ್ಧ ದಿಟ್ಟ ಹೋರಾಟ ಮಾಡಲು ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಿಸಿ, ಪರೀಕ್ಷೆಗಳನ್ನು ಹೆಚ್ಚಿಸುವುದು ಅತ್ಯಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಸರ್ಕಾರಕ್ಕೆ ತಿಳಿಸಿದ್ದಾರೆ.