ದೇಶಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ಕೇಸು:ಇಬ್ಬರು ಜೆಎನ್ ಯು ವಿದ್ಯಾರ್ಥಿನಿಯರ ಬಂಧನ
ಕಳೆದ ಫೆಬ್ರವರಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಸಂದರ್ಭದಲ್ಲಿ ಈಶಾನ್ಯ ದೆಹಲಿಯ ಜಫ್ರಾಬಾದ್ ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಸಾವು ನೋವು ಉಂಟಾದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಜವಹರಲಾಲ್ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.