ದೇಶಎರಡು ವರ್ಷಗಳ ಬಳಿಕ ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಜೈಲಿನಿಂದ ಬಿಡುಗಡೆ
ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಜಾಮೀನಿನ ಮೇರೆಗೆ ಉತ್ತರ ಪ್ರದೇಶ ಜೈಲಿನಿಂದ ಹೊರಗೆ ಬಂದಿದ್ದಾರೆ. ನಿಷೇಧಿತ ಸಂಘಟನೆಯೊಂದಿಗೆ ನಂಟು ಮತ್ತು ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಅವರನ್ನು 2020ರಲ್ಲಿ ಬಂಧಿಸಲಾಗಿತ್ತು. ಎರಡು ವರ್ಷಗಳ ನಂತರ ಇದೀಗ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ.