ರಾಜ್ಯರಾಷ್ಟ್ರೀಯ ಶಿಕ್ಷಣ ನೀತಿ ಗುರಿ ತಲುಪಲು 'ಟಾರ್ಗೆಟ್ 2030': ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಬರುವ 2030ರ ವೇಳೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನಿಗದಿ ಮಾಡಲಾಗಿರುವ ಎಲ್ಲ ಗುರಿಗಳನ್ನು ಸಂಪೂರ್ಣವಾಗಿ ಸಾಧಿಸಲು ಹೆಜ್ಜೆ ಇಟ್ಟಿರುವ ರಾಜ್ಯ ಸರಕಾರ, ಮುಂದಿನ ಮೂರು ವರ್ಷಗಳಲ್ಲಿ 6 ಸಂಶೋಧನೆ ಮತ್ತು 10 ಬೋಧನಾ ಕೇಂದ್ರಿತ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಜತೆಗೆ 34 ಸ್ವಾಯತ್ತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಉದ್ದೇಶಿಸಿದೆ.