ರಾಜಕೀಯಟಿಕೆಟ್ ಕೈತಪ್ಪಿದ ಬೇಸರ: ಬಿಜೆಪಿ ತೊರೆದು 'ಕೈ' ಹಿಡಿದ RSS ಕಟ್ಟಾಳು, ಮಾಜಿ ಶಾಸಕ ಟಿ. ಗುರುಸಿದ್ದನಗೌಡ!
ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೇ ದೊಡ್ಡದಿತ್ತು. ಈ ಮಧ್ಯೆ ಸಂಸದ ಸಿದ್ದೇಶ್ವರ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದರಿಂದ ಬೇಸರಗೊಂಡಿರುವ ದಾವಣಗೆರೆ ಜಗಳೂರು ಕ್ಷೇತ್ರದ ಮಾಜಿ ಶಾಸಕ, ಆರ್ಎಸ್ಎಸ್ ಕಟ್ಟಾಳು ಟಿ ಗುರುಸಿದ್ದನಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.