ರಾಜ್ಯಎಸ್ಸಿಪಿ/ಟಿಎಸ್ಪಿ ಯೋಜನೆಗೆ ತಿದ್ದುಪಡಿ ಮಾಡಿದರೆ ದಲಿತರ ಬಂಡಾಯ: ಸಿದ್ದರಾಮಯ್ಯ
ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗುತ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್ಸಿಪಿ-ಟಿಎಸ್ಪಿ ಯೋಜನೆಯನ್ನು ದುರ್ಬಲಗೊಳಿಸಲು ಹೊರಟರೆ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.