ದೇಶಹರಿಯಾಣ: ಸೋನಿಪತ್ಗೆ ರಾಹುಲ್ ಗಾಂಧಿ ಹಠಾತ್ ಭೇಟಿ, ರೈತರೊಂದಿಗೆ ಚರ್ಚೆ; ಭತ್ತ ನಾಟಿ ಮಾಡಿ ಟ್ರ್ಯಾಕ್ಟರ್ ಸವಾರಿ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದರು ಮತ್ತು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಮಯ ಕಳೆದರು. ಈ ವೇಳೆ ರೈತ ಮಹಿಳೆಯರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.