ರಾಜ್ಯಕಾರಾಗೃಹದಲ್ಲಿ ರಾತ್ರಿಯಿಡೀ ಕಳೆದ ಮುರುಘಾ ಶ್ರೀಗಳಿಗೆ ಎದೆನೋವು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಿಫ್ಟ್
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ರಾತ್ರೋರಾತ್ರಿ ಬಂಧಿಸಿ ಮುಂಜಾನೆಯವರೆಗೆ ಜೈಲಿನಲ್ಲಿದ್ದ ಶ್ರೀಗಳು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.