ರಾಜಕೀಯ'ವ್ಯಕ್ತಿ' ಮತ್ತು 'ವ್ಯಕ್ತಿತ್ವ' ಮಧ್ಯೆ ಮತದಾರರಿಗೆ ಪರೀಕ್ಷೆ: ಹೈವೋಲ್ಟೇಜ್ ಕ್ಷೇತ್ರವಾದ ಬೆಂಗಳೂರು ಗ್ರಾಮಾಂತರ
ತಳಮಟ್ಟದಿಂದ ಬೆಳೆದು ಬಂದ ವೃತ್ತಿಪರ ರಾಜಕಾರಣಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಪ್ರಭಾವಿ ಡಿ.ಕೆ.ಸುರೇಶ್ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸುವ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಮತ್ತೊಂದೆಡೆ, ಖ್ಯಾತ ಹೃದ್ರೋಗ ತಜ್ಞ ಹಾಗೂ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ರಾಜಕೀಯಕ್ಕೆ ಹೊಸಬರು.