ಡಾ. ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಸಮ್ಮತಿ; ಬಿಜೆಪಿ ವರಿಷ್ಠರ ಗ್ರೀನ್ ಸಿಗ್ನಲ್: ಸುಧಾಕರ್
ದೆಹಲಿ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿದ ಬಳಿಕ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಮಿಂಚಿನ ಸಂಚಾರ ಆರಂಭಿಸಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನೂ 2-3 ತಿಂಗಳು ಬಾಕಿ ಇದ್ದು, ಈಗಾಗಲೆ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಮೈಗಾಡ್, ಹೀರೋಗಿಂತ ನಿಮಗೇ ವಿಶಲ್ ಜಾಸ್ತಿ: ಡಾ.ಸುಧಾಕರ್ ಹೊಗಳಿದ ರಮ್ಯಾ ಮೇಲೆ 'ಕೈ'ನಾಯಕರ ಕೆಂಗಣ್ಣು; ಮೋಹಕ ತಾರೆಗೆ ಬಿಜೆಪಿ ಗಾಳ?
ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ನಡೆದ ‘ಚಿಕ್ಕಬಳ್ಳಾಪುರ ಉತ್ಸವ’ದಲ್ಲಿ ನಟಿ ರಮ್ಯಾ ಪಾಲ್ಗೊಂಡು ಅಚ್ಚರಿ ಮೂಡಿಸಿದರು. ಬಳಿಕ ಮಾತನಾಡಿದ ರಮ್ಯಾ, ಸುಧಾಕರ್ ಅವರನ್ನು ಹೊಗಳಿದರು.

108 ಆಂಬುಲೆನ್ಸ್ ಸೇವೆ ಸ್ಥಗಿತ: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆ- ಕಾಂಗ್ರೆಸ್ ಟೀಕೆ
ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕೊರತೆಯಿಂದಾಗಿದ್ದ ಅವಘಡದ ನಂತರ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದ್ದು 40% ಸರ್ಕಾರದ ಅಯೋಗ್ಯತನಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

108 ಸಹಾಯವಾಣಿಯಲ್ಲಿ ತಾಂತ್ರಿಕ ದೋಷ, ಜನರಿಗೆ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗೆ ಕ್ರಮ- ಡಾ.ಕೆ.ಸುಧಾಕರ್
108 ಆಂಬ್ಯುಲೆನ್ಸ್ ಸೇವೆಗಳ ಸಹಾಯವಾಣಿಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿದ್ದು ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದ ಜನರು ಈ ಕುರಿತು ಯಾವುದೇ ಆತಂಕಕ್ಕೊಳಗಾಗುವುದು ಬೇಡ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಮಕ್ಕಳಿಗೆ ಲಸಿಕೆ: ಪ್ರಧಾನಿಯ ಸಮಯೋಚಿತ ನಿರ್ಧಾರ, ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ-ಡಾ. ಸುಧಾಕರ್
ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಯೋಚಿತ ನಿರ್ಧಾರದಿಂದ ಕೊರೋನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಮುಂದಿನ 2-3 ದಿನಗಳಲ್ಲಿ ಎಲ್ಲಾ ವೈದ್ಯರಿಗೂ ರಿಸ್ಕ್ ಭತ್ಯೆ ಪಾವತಿ: ಸಚಿವ ಡಾ. ಕೆ.ಸುಧಾಕರ್
ಮುಂದಿನ ಎರಡು-ಮೂರು ದಿನಗಳಲ್ಲಿ ಎಲ್ಲಾ ವೈದ್ಯರಿಗೂ ರಿಸ್ಕ್ ಭತ್ಯೆ ಪಾವತಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಸಾಧನೆಯ ಲಸಿಕಾ ಗುರಿ ತಲುಪಿದ ಕರ್ನಾಟಕ; ಪಡೆದವರಲ್ಲಿ ಮಹಿಳೆಯರೇ ಹೆಚ್ಚು: ಸಚಿವ ಡಾ. ಸುಧಾಕರ್
ಕರ್ನಾಟಕ ರಾಜ್ಯದಲ್ಲಿ ನಿಗದಿತ ಕೋವಿಡ್ ಲಸಿಕಾ ಗುರಿ ತಲುಪಲಾಗಿದ್ದು, ಪುರುಷರಿಗಿಂತ ಹೆಚ್ಚಿನ ಮಹಿಳೆಯರೇ ಕೋವಿಡ್ ಲಸಿಕೆ ಪಡೆದಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದಿಂದ ಕೊರೊನಾ ನಿರ್ವಹಣೆಗೆ ನೆರವು : ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಕೊರೊನಾ ನಿರ್ವಹಣೆ ವ್ಯವಸ್ಥೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಅಗತ್ಯ ನೆರವುಗಳನ್ನು ನೀಡಿದ್ದು, ಇದಕ್ಕಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ 4 ಲಕ್ಷ ಜನರ ಕೋವಿಡ್ ಪರೀಕ್ಷೆ: ಡಾ. ಕೆ.ಸುಧಾಕರ್
ರಾಜ್ಯದಲ್ಲಿ ಇದುವರೆಗೆ 4 ಲಕ್ಷ ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದ ಚೇತರಿಕೆಯ ಪ್ರಮಾಣ ಶೇಕಡಾ 44ರಷ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

