ಡಿ.ಕೆ ಸುರೇಶ್

ತಮಿಳುನಾಡು ಚುನಾವಣೆ: ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮದ ಉಸ್ತುವಾರಿ ಡಿ.ಕೆ ಸುರೇಶ್ ಹೆಗಲಿಗೆ!
ರಾಹುಲ್ ಗಾಂಧಿ ಅವರು ಏಪ್ರಿಲ್ 18ರಂದು ತಮಿಳುನಾಡಿಗೆ ತೆರಳಲಿದ್ದು, ಪೊನ್ನೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಸಿದ್ಧತೆಯಲ್ಲಿ ತೊಡಗಿರುವ ಡಿ.ಕೆ. ಸುರೇಶ್ ಅವರು ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು

ಕೇಂದ್ರಕ್ಕೆ ಆದಾಯ ತೆರಿಗೆ ಕಟ್ಟುವ ಬದಲು ರೈತರಿಗೆ ಪ್ರೋತ್ಸಾಹಧನ ಹಂಚಿಕೆ; ಹಾವುಗಳಿಗಿಂತ ಇಲಿ-ಹೆಗ್ಗಣ, ಇರುವೆಗಳ ಗೂಡು ಹೆಚ್ಚಿದೆ: ಡಿ.ಕೆ ಸುರೇಶ್
ನಾನು ಲಾಭ ತೋರಿಸಿದರೆ ಮಾತ್ರ ಅಲ್ಲವೇ ತೆರಿಗೆ ಕಟ್ಟಬೇಕು. ನಮ್ಮ ರೈತರ ಹಣ ರೈತರಿಗೆ ಮರಳಿ ಹೋಗಬೇಕು ಎಂದು 60 ಕೋಟಿ ಹಣವನ್ನು ಮರಳಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ .

ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ; ಉಪಚುನಾವಣೆ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಡಿ.ಕೆ ಸುರೇಶ್
ಇದೇ 16 ನೇ ತಾರೀಕಿನಿಂದ ವಿಶೇಷ ಲೋಕಸಭಾ ಅಧಿವೇಶನ ಕರೆಯಲಾಗಿದೆ. ಸರ್ಕಾರ ಯಾವ ರೀತಿಯಲ್ಲಿ ಬಿಲ್ ಮಂಡಿಸಲಿದೆ ಎಂದು ನೋಡಬೇಕಿದೆ. ಒಟ್ಟಾರೆ ದಕ್ಷಿಣದ ಹಣವನ್ನು ಉತ್ತರದ ರಾಜ್ಯಗಳಿಗೆ ತಗೆದುಕೊಂಡು ಹೋಗುವಂತಹ ಹುನ್ನಾರ ಇದಾಗಿದೆ.

ಮಧ್ಯ ಪ್ರಾಚ್ಯ ಬಿಕ್ಕಟ್ಟು: ಹಾಲಿನ ಬೆಲೆ ಏರಿಕೆಯ ಸುಳಿವು ನೀಡಿದ ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್!
ಕೇಂದ್ರ ಸರ್ಕಾರ ಸೂಚ್ಯವಾಗಿ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಯ ನಿರ್ದೇಶನ ನೀಡಿದೆ. ಹೀಗಾಗಿ ಸಹಜವಾಗಿಯೇ ಹಾಲು ಒಕ್ಕೂಟಗಳು ತೊಂದರೆಗೆ ಸಿಲುಕುತ್ತಿವೆ. ಹಾಲು ಹಾಗೂ ನಂದಿನಿ ಉತ್ಪನ್ನಗಳಿಗೆ ಅಡುಗೆ ಅನಿಲ ಬಳಕೆಯ ಬಾಯ್ಲರ್ ಗಳನ್ನು ಉಪಯೋಗಿಸುತ್ತಿದ್ದೇವೆ.

ಯುಗಾದಿ ಹಬ್ಬಕ್ಕೆ ಬಮೂಲ್ ನಿಂದ ಭರ್ಜರಿ ಗಿಫ್ಟ್: ಪ್ರತಿ ಲೀಟರ್ ಗೆ 1 ರೂ ನಂತೆ ಹಾಲು ಉತ್ಪಾದಕರಿಗೆ ಬೋನಸ್; ಡಿ.ಕೆ ಸುರೇಶ್
ಕಳೆದ ಸಾಲಿನಲ್ಲಿ ನಮ್ಮ ಒಕ್ಕೂದಿಂದ 2900 ಕೋಟಿ ವಹಿವಾಟು ಮಾಡಿದ್ದು, ಈ ವರ್ಷ ಮಾರ್ಚ್ 31ರ ವೇಳೆಗೆ 3,400 ಕೋಟಿಯಷ್ಟು ವಹಿವಾಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ನಮ್ಮಲ್ಲಿ ಆಡಳಿತಾತ್ಮಕ ವೆಚ್ಚ ಹೆಚ್ಚಾಗಿದೆ. ನಮ್ಮಲ್ಲಿ 880 ಖಾಯಂ ಸಿಬ್ಬಂದಿ, 1800 ಗುತ್ತಿಗೆ ಕಾರ್ಮಿಕರು ಇದ್ದಾರೆ.

'CM-DCM ಮೊದಲಿನಿಂದಲೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ; ನನಗೆ ರಾಜಕಾರಣವೂ ಗೊತ್ತಾಗುವುದಿಲ್ಲ, ಅಷ್ಟು ತಿಳುವಳಿಕೆಯೂ ಇಲ್ಲ'
ನನಗೆ ಇದರ ಬಗ್ಗೆ ಮಾಹಿತಿಯಿಲ್ಲ, ತಿಳುವಳಿಕೆಯೂ ಇಲ್ಲ. ನನಗೆ ಅಷ್ಟು ರಾಜಕಾರಣವೂ ಗೊತ್ತಾಗುವುದಿಲ್ಲ. ನೀವು ವಿಶ್ಲೇಷಣೆ, ವ್ಯಾಖ್ಯಾನ ಮಾಡುವುದಕ್ಕೆ ಹೇಳಿದ್ದಾರೆ ಎನಿಸುತ್ತದೆ ನೀವು ಏನು ಬೇಕಾದರೂ ಮಾಡಿ" ಎಂದರು.

ಗ್ಯಾರಂಟಿ ಯೋಜನೆ ನಮ್ಮ ವಾಗ್ದಾನ; ಹೊರೆಯಾದರೂ ಕೊಟ್ಟ ಮಾತಿನಂತೆ ಮುಂದುವರಿಯಬೇಕು: ಡಿ.ಕೆ ಸುರೇಶ್
ಗ್ಯಾರಂಟಿ ಯೋಜನೆ ಯಾರು ಅಸಹಾಯಕರು, ಜೀವನ ನಡೆಸಲು ಕಷ್ಟವಿದೆ, ಯಾರು ಬದುಕಲ್ಲಿ ಹೋರಾಟ ಮಾಡ್ತಿದ್ದಾರೆ, ಅಂಥವರಿಗೆ ಆ ಯೋಜನೆಗಳು ಇರುವಂಥದ್ದು. ಸಿರಿವಂತರು ತೆಗೆದುಕೊಳ್ತಿದ್ರೆ ತಪ್ಪು ಎಂದು ಕಿವಿಮಾತು ಹೇಳಿದ್ರು.

ಕಟ್ಟಾ ಕಾಂಗ್ರೆಸ್ಸಿಗರೆಲ್ಲರೂ ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ: ಮಹಾದೇವಪ್ಪಗೆ ಡಿ.ಕೆ ಸುರೇಶ್ ತಿರುಗೇಟು!
ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ, ಯಜಮಾನನಿಗೆ ಋಣ ತೀರಿಸುತ್ತೆ, ನಮ್ಮನ್ನ ಕಾಪಾಡುತ್ತೆ ಎಂಬ ವಿಶ್ವಾಸದಲ್ಲಿ ಮಾಲೀಕ ನಾಯಿಗೆ ಊಟ ಹಾಕುತ್ತಾರೆ ಎಂದಿದ್ದಾರೆ.

ರಾಜಕೀಯ ಶಾಶ್ವತವಲ್ಲ ಎಂಬ CM ಹೇಳಿಕೆಗೆ ಹೆಚ್ಚಿನ ವಿಶ್ಲೇಷಣೆ ಅನಗತ್ಯ: ಡಿ.ಕೆ ಸುರೇಶ್
ಮಂಗಳೂರಿನಲ್ಲಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ವೇಣುಗೋಪಾಲ್ ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಕಾರಣ ಅಲ್ಲಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.

