ರಾಜ್ಯಜನರ ಸಂಕಷ್ಟಗಳ ಪರಿಹಾರಕ್ಕೆ 'ನಿಮ್ಮ ಮನೆ ಬಾಗಿಲಿಗೆ ಸರ್ಕಾರ' ಕಾರ್ಯಕ್ರಮಕ್ಕೆ ಚಾಲನೆ
ಅಧಿಕಾರಿಗಳ ಬಳಿ ನೇರವಾಗಿ ದೂರುಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯವಾಗದ ನಾಗರೀಕರು ಜ.3ರಿಂದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದರು.